ನವದೆಹಲಿ : ಬದ್ಲಾಪುರ ಲೈಂಗಿಕ ದೌರ್ಜನ್ಯ ಆರೋಪಿಯ ಕಸ್ಟಡಿ ಸಾವಿನ ಬಗ್ಗೆ ಬಾಂಬೆ ಹೈಕೋರ್ಟ್ ಮುಂಬೈ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.
ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಹೇಳಿದೆ. ಆರೋಪಿ ಅಕ್ಷಯ್ ಶಿಂಧೆಯನ್ನು ಜೈಲಿನಿಂದ ಹೊರಗೆ ಕರೆತಂದಾಗಿನಿಂದ ಶಿವಾಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಘೋಷಿಸುವವರೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಿಡುವಂತೆ ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ.
ಬದ್ಲಾಪುರ ಶಾಲೆಯಲ್ಲಿ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಶಿಂಧೆ ಅವರನ್ನು ತಲೋಜಾ ಜೈಲಿನಿಂದ ಬದ್ಲಾಪುರಕ್ಕೆ ಕರೆದೊಯ್ಯುತ್ತಿದ್ದಾಗ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ನಿಲೇಶ್ ಮೋರೆ ಅವರ ಪಿಸ್ತೂಲ್ ಕಸಿದುಕೊಂಡು ಬೆಂಗಾವಲು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರು ಪ್ರತೀಕಾರದ ಗುಂಡಿನ ದಾಳಿಯಲ್ಲಿ ಶಿಂಧೆಯನ್ನು ಎನ್ ಕೌಂಟರ್ ಮಾಡಿದ್ದರು ಎನ್ನಲಾಗಿದೆ.