ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಶಾಲಾ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, , ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.