ಮೈಸೂರು : ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ತುತ್ತೂರಿಯಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವ ಹಿನ್ನೆಲೆ ಮೈಸೂರು ದಸರಾದಲ್ಲಿ ತುತ್ತೂರಿ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವಂತೆ , ಈ ಬಗ್ಗೆ ಕಟ್ಟು ನಿಟ್ಟಾದ ಕಾನೂನು ಕ್ರಮ ಜಾರಿಗೊಳಿಸುವಂತೆ ಪೊಲೀಸರಿಗೆ ಅವರು ಸೂಚನೆ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ.
ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ. ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ.