ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಾಂತ್ ಶರ್ಮಾ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ಅನಿವಾಸಿ ಭಾರತೀಯ ಆಗಿರುವ ಶ್ರೀಕಾಂತ್ ಶರ್ಮಾ ಎಂಬಾತನನ್ನು ವಿಜಯನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ಲಂಡನ್ ನಲ್ಲಿ ಸ್ವಂತ ಕಂಪನಿ ಹೊಂದಿದ್ದು, ರಾಜಾಜಿನಗರದಲ್ಲಿ ಮನೆ ಮಾಡಿಕೊಂಡಿದ್ದನು.
ಹಿಟ್ & ರನ್ ಕೇಸ್ ಸಂಬಂಧ ವಿಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಈ ಹಿನ್ನೆಲೆ ಇಂದು ಆರೋಪಿ ಶ್ರೀಕಾಂತ್ ನನ್ನು ಬಂಧಿಸಲಾಗಿದೆ.