ಬಾಂಗ್ಲಾ : ಬಾಂಗ್ಲಾದೇಶದಲ್ಲಿ ಭಾರಿ ಹಿಂಸಾಚಾರ ನಡೆದ ಬಳಿಕ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹಸೀನಾ ರಾಜೀನಾಮೆ ಬಗ್ಗೆ ಬಾಂಗ್ಲಾದೇಶದ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಹಿಂಸಾಚಾರದ ಮಧ್ಯೆ, ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರಬಹುದು ಎಂಬ ವರದಿಗಳು ಬರುತ್ತಿವೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.
ಬಾಂಗ್ಲಾದೇಶದಲ್ಲಿ ನಡೆದ ಘರ್ಷಣೆಗಳಿಂದ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 300 ಕ್ಕೆ ಏರಿದೆ .
ಪೊಲೀಸರು ಮತ್ತು ಆಡಳಿತ ಪಕ್ಷದ ಕಾರ್ಯಕರ್ತರೊಂದಿಗೆ ಭಾನುವಾರ ನೂರಾರು ಗಾಯಗೊಂಡ ವಿದ್ಯಾರ್ಥಿ ಪ್ರತಿಭಟನಾಕಾರರು ಘರ್ಷಣೆ ನಡೆಸಿದ್ದಾರೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಕರೆ ನೀಡಿದ ಹತ್ತಾರು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದು, ಸ್ಟನ್ ಗ್ರೆನೇಡ್ಗಳನ್ನು ಬಳಸಿದ್ದಾರೆ.