ಮಂಗಳೂರು : ಬೀದರ್ ಬಳಿಕ ಮಂಗಳೂರಿನಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಬಂದೂಕು ತೋರಿಸಿ ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆಯೊಡ್ಡಿ ಹಣ, ಚಿನ್ನಾಭರಣ ದೋಚಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್’ ಗೆ ನುಗ್ಗಿದ 5 ಮಂದಿ ದುಷ್ಕರ್ಮಿಗಳು ಬಂದೂಕು ತೋರಿಸಿ ಹಣ, ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ.