ಬೆಂಗಳೂರು : ಬೆಂಗಳೂರಲ್ಲಿ ಬೈಕ್’ಗೆ ಬಿಬಿಎಂಪಿಯ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಮೃತ ಬಾಲಕನನ್ನು 10 ವರ್ಷದ ಐಮಾನ್ ಎಂದು ಗುರುತಿಸಲಾಗಿದೆ. ಅಪ್ಪನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಹಿನ್ನೆಲೆ ರೊಚ್ಚಿಗೆದ್ದ ಸಾರ್ವಜನಿಕರು ಕಸದ ಲಾರಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚುತ್ತಿದ್ದಂತೆ ಕೂಡಲೇ ಚಾಲಕ ಲಾರಿಯಿಂದ ಕೆಳಗಿಳಿದಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.