ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಅವರಿಗೆ ಚಾಕು ಇರಿತ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ದೂರು ದಾಖಲಾಗಿದೆ.
ತಂದೆ ಪೃಥ್ವಿ ಸಿಂಗ್ ಪರವಾಗಿ ಮಗ ಜಸ್ವಿರ್ಸಿಂಗ್, ಬೆಳಗಾವಿಯ ಎಪಿಎಂಸಿ ಠಾಣೆಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ, ಸುಜೀತ್ ಜಾಧವ್, ಇಬ್ಬರು ಗನ್ ಮ್ಯಾನ್, ಸದ್ದಾಂ ಎನ್ನುವವರ ವಿರುದ್ಧ ಕೊಲೆ ಯತ್ನ ಜಾತಿನಿಂದನೆ, ಹಾಗೂ ಜೀವಬೆದರಿಕೆ ಹಾಕಿದ್ದರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಕೈ, ಬೆನ್ನಿಗೆ ಗಾಯಗಳಾಗಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಜಿ ಸಚಿವ ರಮೇಶ ಜಾರಕಿಹೊಳಿ ಅತ್ಯಾಪ್ತನಾಗಿರುವ ಪೃಥ್ವಿ ಸಿಂಗ್ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ, ಕಾಂಗ್ರೆಸ್ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.ಕೆಎಲ್ಇ ಆಸ್ಪತ್ರೆಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಭೇಟಿ ನೀಡಿ ಗಾಯಾಳು ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ್ದಾರೆ.