ಬೆಂಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 199 ಎಲ್ಇಡಿ ಟಿವಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಠಾಣೆ ವ್ಯಾಪ್ತಿಯ ಟೋಲ್ ನಲ್ಲಿ ವಾಹನ ತಪಾಸಣೆ ನಡೆಸಿದಾಗ 199 ಟಿವಿ ಪತ್ತೆಯಾಗಿದೆ. ಇಸ್ಮಾಂಪುರ ಗ್ರಾಮದ ಬಾಬುಜಾನ್ ಗೆ ಸೇರಿದ 199 ಎಲ್ಇಡಿ ಟಿವಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ