![](https://kannadadunia.com/wp-content/uploads/2022/10/breaking-news-poster-design-template-d020bd02f944a333be71e17e3a38db24_screen-1.jpg)
ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ದಿನದಿಂದ ದಿನಕೆಕ ಹೆಚ್ಚಳವಾಗುತ್ತಿದ್ದು, ಕುಡಿದ ಮತ್ತಿನಲ್ಲಿ ಕಿಡಿಗೇಡಿಯೊಬ್ಬ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನು ಬೀಳಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಬೆಂಗಳೂರಿನ ಪ್ರಕಾಶ್ ನಗರದ ಕುವೆಂಟ್ ಮೆಟ್ರೋ ಸ್ಟೇಷನ್ ಬಳಿಕ ಕಿಡಿಗೇಡಿಯೊಬ್ಬ ರಾತ್ರಿ ಕುಡಿದ ಮತ್ತಿನಲ್ಲಿ ಮನೆಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನು ಬೀಳಿಸಿದ್ದಾನೆ. ಬಳಿಕ ಪೀಜಿ ಬಳಿ ನಿಲ್ಲಿಸಿದ್ದ ಬೈಕ್ ಗಳನ್ನು ಕಲ್ಲಿನಲ್ಲಿ ಒದ್ದು ಬೀಳಿಸಿದ್ದಾನೆ. ಸದ್ಯ ಕಿಡಿಗೇಡಿ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.