ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ದುರಂತ ನಡೆದ ಸ್ಥಳಕ್ಕೆ CM ಸಿದ್ದರಾಮಯ್ಯ ಭೇಟಿ ನೀಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 8 ಮಂದಿಯನ್ನು ರಕ್ಷಿಸಲಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೃತದೇಹವನ್ನು ಅವರ ಜಾಗಗಳಿಗೆ ಕಳುಹಿಸಲಾಗುತ್ತದೆ. ಕಳಪೆ ಕಾಮಗಾರಿಯಿಂದ ಈ ಅವಘಡ ನಡೆದಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳಿಗೆ ನೋಟಿಸ್ ನೀಡಲಾಗಿದೆ ಎಂದರು. ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತದ ಬಗ್ಗೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕಲೆಹಾಕಿದ್ದಾರೆ.
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಅ.22ರ ಸಂಜೆ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿದುಬಿದ್ದು ದುರಂತ ಸಂಭವಿಸಿತ್ತು. ಅವಶೆಷಗಳಡಿಯಲ್ಲಿ ಸಿಲುಕಿದ್ದ 8 ಜನರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ. ದುರಂತದಲ್ಲಿ ಒಟ್ಟು 13 ಜನರನ್ನು ರಕ್ಷಿಸಲಾಗಿದೆ.