
ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು, ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಂಗಳೂರು ಬಂದ್ ಆರಂಭವಾದ ಬೆನ್ನಲ್ಲೇ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧಿಸಿ ಇಂದು ರೈತ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ನಗರದ ಹಲವಡೆ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.