ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದ್ದು, 2 ದಿನಗಳ ಬಳಿಕ ಇಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದರು. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್. ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ಪೊಲೀಸರು ಹೇಮಾ ಅವರನ್ನು ಬಂಧಿಸಿದ್ದರು. ಜೂನ್ 3ರಂದು ಹೇಮಾ ಅವರನ್ನು ಬಂಧಿಸಲಾಗಿತ್ತು. ನಂತರ ಅವರಿಗೆ ಜಾಮೀನು ಮಂಜೂರಾಗಿತ್ತು. ಜಾಮೀನು ಸಿಕ್ಕ 2 ದಿನಗಳ ಬಳಿಕ ಜೈಲಿನಿಂದ ಬಿಡುಗಡೆ ಆಗಿ ತಮ್ಮ ಸಹೋದರ ಶ್ರೀನಿವಾಸ್ ಜೊತೆ ಹೋಗಿದ್ದಾರೆ.