ಬೆಂಗಳೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕರೂ ಭವಾನಿ ರೇವಣ್ಣಗೆ ಸಂಕಷ್ಟ ತಪ್ಪಿಲ್ಲ, ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಅವರಿಗೆ ಖಡಕ್ ಸೂಚನೆ ನೀಡಿದೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ನೀಡಿದೆ. ಹಾಗೂ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಕಳೆದ 15 ದಿನಗಳ ಹಿಂದೆ ಎಸ್ಐಟಿ ಅಧಿಕಾರಿಗಳು ಹೊಳೆನರಸೀಪುರ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಆನಂತರ ಮೇ 6ರಂದು ಜೆಡಿಎಸ್ ಶಾಸಕರು, ಮಾಜಿ ಶಾಸಕರು ಹೊಳೆನರಸೀಪುರ ನಿವಾಸದಲ್ಲಿ ಭವಾನಿ ರೇವಣ್ಣ ಅವರನ್ನು ಭೇಟಿಯಾಗಿದ್ದರು. ರೇವಣ್ಣ ಬಿಡುಗಡೆಯಾಗಿ ಜೈಲಿನಿಂದ ಬಂದರೂ ಅವರ ಭೇಟಿಗೂ ಭವಾನಿ ರೇವಣ್ಣ ಬಂದಿಲ್ಲ. ಕಳೆದ 15 ದಿನಗಳಿಂದ ಭವಾನಿ ರೇವಣ್ಣ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಭವಾನಿ ರೇವಣ್ಣ ನಿಗೂಢ ಸ್ಥಳದಲ್ಲಿದ್ದಾರೆ ಎನ್ನಲಾಗುತ್ತಿದೆ.