ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವವರು ಖಾಸಗಿ ದೂರು ನೀಡಿದ್ದರು. ಈ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಕಟೀಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ನಳೀನ್ ಕುಮಾರ್ ಕಟೀಲ್ ಪರ ವಕೀಲ ಕೆ.ಜಿ.ರಾಘವನ್ ಅವರ ವಾದ-ಪ್ರತಿವಾದ ಆಲಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.