ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಮಧುಗಿರಿ ಕೋರ್ಟ್ ಆದೇಶ ಹೊರಡಿಸಿದೆ.
ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಮಧುಗಿರಿ ಕೋರ್ಟ್ ಆದೇಶ ಹೊರಡಿಸಿತ್ತು. ಇದೀಗ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ನಾಳೆ ಜೈಲಿನಿಂದ ರಿಲೀಸ್ ಆಗಲಿದ್ದಾರೆ. ಮಿಡಿಗೇಶಿ ಠಾಣೆ ಪೊಲೀಸರು ಡ್ರೋನ್ ಪ್ರತಾಪ್ ಅವರನ್ನು ಬಂಧಿಸಿ ಮಧುಗಿರಿ ಜೆ ಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್ ಡ್ರೋನ್ ಪ್ರತಾಪ್ ಗೆ 10 ದಿನಗಳ ಕಾಲ ಅಂದರೆ ಡಿ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್ ಅವರನ್ನು ಬಂಧಿಸಿದ್ದ ಪೊಲೀಸರು, ಬಿಎನ್ ಎಸ್ ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.