ಬೆಂಗಳೂರು : ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಫೈಟರ್ ರವಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು , ನಂತರ ಪೊಲೀಸರು ಫೈಟರ್ ರವಿಯನ್ನು ಬಂಧಿಸಿದ್ದರು. ಇದೀಗ ಹೈಕೋರ್ಟ್ ರಿಲೀಫ್ ನೀಡಿದೆ. ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಮಾಜಿ ರೌಡಿಶೀಟರ್ ಬಿ.ಎಂ.ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಹಾಗೂ ಅವರ ಗನ್ ಮ್ಯಾನ್ನನ್ನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದರು.
ಅಪರಾಧ ಹಿನ್ನೆಲೆಯುಳ್ಳ ಫೈಟರ್ ರವಿ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅಪರಾಧ ಹಿನ್ನೆಲೆಯುಳ್ಳ ಫೈಟರ್ ರವಿ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ನಂತರ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿಜೆಪಿಗೆ ಗುಡ್ ಬೈ ಹೇಳಿದ್ದರು.