ಬೆಂಗಳೂರು : ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ನೀಡಿದ ಜಾಮೀನು ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.
ಹೆಚ್ ಡಿ ರೇವಣ್ಣ ಗೆ ನೀಡಿದ ಜಾಮೀನು ರದ್ದುಗೊಳಿಸುವಂತೆ ಎಸ್ ಐ ಟಿ (SIT) ಹೈಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ರದ್ದು ಮಾಡಲು ನಿರಾಕರಿಸಿದೆ. ಹಾಗೂ ಉಳಿದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.ಸತೀಶ್ ಬಾಬು, ಮಧುಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಕೋರ್ಟ್ ಜಾಮೀನು ನೀಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ. ರೇವಣ್ಣ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ ಜಾಮೀನು ರದ್ದುಪಡಿಸುವಂತೆ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ಕುರಿತು ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.