ಬಳ್ಳಾರಿ : ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ಜನಾರ್ಧನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು, ಈ ಸಂಬಂಧ ಹಲವು ಬಾರಿ ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಅವಕಾಶ ನೀಡಿರಲಿಲ್ಲ. ಇದೀಗ ಗಣಿಧನಿ ಜನಾರ್ಧನ ರೆಡ್ಡಿಗೆ ರಿಲೀಫ್ ಸಿಕ್ಕಿದ್ದು, ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.