ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಮುರುಘಾಶ್ರೀ ಬಿಡುಗಡೆಗೆ ಚಿತ್ರದುರ್ಗದ 2 ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಾಕ್ಷಿಗಳ ವಿಚಾರಣೆ ಬಹುತೇಕ ಮುಗಿದ ಹಿನ್ನೆಲೆ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಮುರುಘಾಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು, ಆದರೆ ಸಾಕ್ಷಿಗಳ ವಿಚಾರಣೆ ನಡೆಯುವವರೆಗೂ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಇದೀಗ ಮುರುಘಾಶ್ರೀ ಬಿಡುಗಡೆಗೆ ಚಿತ್ರದುರ್ಗದ 2 ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.