ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ಶಾಕ್ ಎದುರಾಗಿದ್ದು, ಸುಪ್ರೀಂಕೋರ್ಟ್ ನಲ್ಲಿ ಪೊಲೀಸರ ಮೇಲ್ಮನವಿ ವಿಚಾರಣೆಗೆ ದಿನಾಂಕ ಫಿಕ್ಸ್ ಆಗಿದೆ.
ಜ.24 ರಂದು ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಹಾಗೂ 7 ಆರೋಪಿಗಳ ವಿಚಾರಣೆ ನಡೆಯಲಿದೆ. ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಜ.24 ರಂದು ವಿಚಾರಣೆ ನಡೆಯಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ದರ್ಶನ್ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 2024ರ ಜೂನ್ 11ರಂದು ದರ್ಶನ್ ಬಂಧಿಸಲಾಗಿತ್ತು. 2024ರ ಅಕ್ಟೋಬರ್ 30ರಂದು ವೈದ್ಯಕೀಯ ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ನಂತರ 2024ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್ ಸೇರಿ 7 ಮಂದಿ ಆರೋಪಿಗಳಿಗೆ ನಿಯಮಿತ ಜಾಮೀನು ಮಂಜೂರು ಮಾಡಿತ್ತು.ಸುಪ್ರೀಂಕೋರ್ಟ್ ದರ್ಶನ್ ಅವರ ಜಾಮೀನು ರದ್ದು ಮಾಡಿದಲ್ಲಿ ಕೂಡಲೇ ಬಂಧನವಾಗಿ ಜೈಲು ಸೇರಬೇಕಾಗುತ್ತದೆ.