ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದೆ.
ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರಿಗೆ ಗೃಹ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಗೃಹ ಇಲಾಖೆ ಅನುಮತಿ ನೀಡಿ ಕಡತ ರವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
‘ಮೆರಿಟ್ಸ್ ಆಫ್ ದಿ ಕೇಸ್’ ಮೇಲೆ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದು, 1-2 ದಿನದಲ್ಲಿ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗುತ್ತದೆ. ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಇತ್ತೀಚೆಗೆ ಜಾಮೀನು ಮಂಜೂರು ಮಾಡಿತ್ತು. ಸರ್ಜರಿ ಮಾಡಿಸಿಕೊಳ್ಳದೇ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಬೆನ್ನಲ್ಲೇ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಲು ಸಿದ್ದತೆ ನಡೆಸಿದ್ದಾರೆ.