ಬೆಂಗಳೂರು : ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ ಗರ್ಲಾನಿಗೆ ಬಿಗ್ ಶಾಕ್ : ಎದುರಾಗಿದ್ದು, ಸುಪ್ರೀಂಕೋರ್ಟ್’ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ದತೆ ನಡೆಸಿದ್ದಾರೆ.
ಡ್ರಗ್ಸ್ ಕೇಸ್ ನಲ್ಲಿ ಸಿಸಿಬಿ ಪೊಲೀಸರು ಸಂಜನಾ ಗರ್ಲಾನಿಯನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಸಂಜನಾ ಹೊರಗಡೆ ಬಂದಿದ್ದರು. ಹೈಕೋರ್ಟ್ ನಲ್ಲಿ ಪ್ರಕರಣ ರದ್ದಾದ ಬಳಿಕ ಇದೀಗ ಸುಪ್ರೀಂಕೋರ್ಟ್’ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ದತೆ ನಡೆಸಿದ್ದಾರೆ.
ನಟಿ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದು, ಸರ್ಕಾರದ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಸಿದ್ದತೆ ನಡೆಸಲಾಗಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ಸಿಗುತ್ತಿದ್ದಂತೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗರ್ಲಾನಿ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್ ಗಳ ಬಂಧನವಾಗಿತ್ತು. ಸಂಜನಾ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿತ್ತು.