ಬೆಂಗಳೂರು : ಜನಸಾಮಾನ್ಯರಿಗೆ ಬಿಗ್ ಶಾಕ್ ಎಂಬಂತೆ ಸಂಕ್ರಾಂತಿ ಹಬ್ಬದ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರವನ್ನು 5 ರೂ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ ಕೂಡಲೇ ದರ ಹೆಚ್ಚಳ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಚರ್ಚೆಯಾಗುತ್ತಲೇ ಇದೆ. ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ KMF ಗೆ ಮನವಿ ಮಾಡಿವೆ. ಕಳೆದ ಜೂನ್ ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು.