ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಡಿಸಿಎಂ ಡಿಕೆಶಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.
ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ನಂತರ ಜಾರಿ ನಿರ್ದೇಶನಾಲಯ ಡಿಕಿಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಡಿಕೆಶಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಹಿಂಪಡೆದಿತ್ತು. ಈ ಕೇಸ್ ಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.