alex Certify BREAKING : ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ E.D |B. Nagendra | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ E.D |B. Nagendra

ಬೆಂಗಳೂರು : ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿದೆ. ನಾಳೆ ಹೈಕೋರ್ಟ್ ನಲ್ಲಿ ವಿಚಾರಣೆ ನಿಗದಿಯಾಗಿದೆ.

ಇಡಿ ಅಧಿಕಾರಿಗಳು ನನ್ನನ್ನು 3 ತಿಂಗಳು ಬಂಧಿಸಿ ಕಿರುಕುಳ ನೀಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿರಲಿಲ್ಲ ಎಂದು ಬಿಡುಗಡೆ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರ ಹೇಳಿದ್ದರು.ವಾಲ್ಮೀಕಿ ನಿಗಮದ ಹಗರಣ ಸಂಬಂಧ ಜುಲೈ 12ರಂದು ಇಡಿ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2 ಲಕ್ಷ ಬಾಂಡ್ , ಇಬ್ಬರ ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಸೇರಿದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...