ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್’ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಪ್ರಕರಣದಿಂದ ಕೈ ಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತಿರಸ್ಕರಿಸಿದೆ.
ಇಂದು ವಿಚಾರಣೆ ನಡೆಸಿದ ಕೋರ್ಟ್ ಅತ್ಯಾಚಾರ ಪ್ರಕರಣದಿಂದ ಕೈ ಬಿಡಲು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಹಾಗೂ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಆರೋಪದಡಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುವಂತಾಗಿದೆ.