ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗೆ ಬಿಗ್ ಶಾಕ್ ಎದುರಾಗಿದ್ದು, ಜನಪ್ರತಿನಿಧಿಗಳ ಕೋರ್ಟ್ 6 ಕೋಟಿ 96 ಲಕ್ಷದ 70 ಸಾವಿರ ದಂಡವನ್ನು ವಿಧಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ದಂಡ ವಿಧಿಸಿ ಆದೇಶಿಸಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ಶಾಕ್ ನೀಡಿದ್ದು,ಭಾರಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ದಂಡ ಪಾವತಿ ಮಾಡದೇ ಹೋದರೆ ಇದ್ರೇ 6 ತಿಂಗಳು ಜೈಲು ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ .
6.6 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧು ಬಂಗಾರಪ್ಪಗೆ ಜಾಮೀನು ಕೂಡ ಸಿಕ್ಕಿತ್ತು. . 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆಕಾಶ್ ಆಡಿಯೋ ಕಂಪನಿಯ ಎಂಡಿ ಆಗಿದ್ದ ಮಧು ಬಂಗಾರಪ್ಪ ಅವರು 2011ರಲ್ಲಿ ರಾಜೇಶ್ ಎಕ್ಸ್ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂಪಾಯಿ ಚೆಕ್ ನೀಡಿದ್ದರು. ಆದ್ರೆ, ಆ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು.