ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಕಳೆದ ವಾರ ಈ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಸೂರಜ್ ರೇವಣ್ಣರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ನಂತರ ಜಾಮೀನು ಕೋರಿ ಸೂರಜ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ.
ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಹಂಚಿಕೆ ಕರಣದಲ್ಲಿ ಈಗಾಗಲೇ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದು, ಇಬ್ಬರು ಸಹೋದರರು ಕೂಡ ಜೈಲು ಸೇರಿದ್ದಾರೆ.