ಬೆಂಗಳೂರು: ರಾಜ್ಯ ಸರ್ಕಾರ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ಮಾಡಿದೆ.
ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್ ಸೇಲ್ಸ್ ಟ್ಯಾಕ್ಸ್ ದರ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆಯಾಗಿದೆ. ಡಿಸೇಲ್ ಬೆಲೆ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಕಂಡಿದೆ.