ಬೆಂಗಳೂರು : ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಳಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.
ಮೊದಲನೇ ಪ್ರಕರಣದಲ್ಲಿ ಜಾಮೀನು ಕೋರಿದ್ದ ಪ್ರಜ್ವಲ್ ಅರ್ಜಿ ವಜಾಗೊಂಡಿದ್ದು, ವಿಶೇಷ ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಚಿತ್ರೀಕರಣ, ಲೈಂಗಿಕ ದೌರ್ಜನ್ಯ ಸೇರಿದಂತೆ ಮೂರು ಗಂಭೀರ ಪ್ರಕರಣಗಳು ದಾಖಲಾಗಿದ್ದು. ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಂಗ ಬಂಧನದಿಂದ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಎಸ್ ಐ ಟಿ ಅಧಿಕಾರಿಗಳು ಅವರನ್ನು 4 ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು.