ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10 % ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ ಎಂದರು. ಈ ವರ್ಷದಿಂದ 10ನೇ ತರಗತಿ (ಎಸ್ಎಸ್ಎಲ್ಸಿ) ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಅಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಗೆ ಅವಕಾಶ ನೀಡುವ ವಿಚಾರಕ್ಕೆ ಕುರಿತಂತೆ ಮಾತನಾಡಿದ ಸಚಿವರು ಹಿಜಾಬ್ ವಿವಾದ ಸದ್ಯ ಕೋರ್ಟ್ ನಲ್ಲಿದೆ. ಇನ್ನೂ ಇತ್ಯರ್ಥವಾಗಿಲ್ಲ. ಈ ಬಗ್ಗೆ ಗೃಹ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.