ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪವಿತ್ರಾಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿರುವುದು ಧೃಡವಾಗಿದೆ.
ಹೌದು, ಪವಿತ್ರಾ ಗೌಡ ಇನ್ ಸ್ಟಾಗ್ರಾಂ ಖಾತೆಗೆ ರೇಣುಕಾಸ್ವಾಮಿ ಬಳಸುತ್ತಿದ್ದ ಖಾತೆಯಿಂದ ಫೋಟೋ ಕಳುಹಿಸಿರುವುದನ್ನು ಪೊಲೀಸರು ಕನ್ಪರ್ಮ್ ಮಾಡಿಕೊಂಡಿದ್ದಾರೆ.
ಹಾಗೂ ಇನ್ನೊಂದು ಮಹತ್ವದ ಅಂಶವೆಂದರೆ ಚಾರ್ಜ್ ಶೀಟ್ ನಲ್ಲಿ ರೇಣುಕಾಸ್ವಾಮಿ ಕೊಲೆಯಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳು ಭಾಗಿಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ನಿಖಿಲ್ ನಾಯ್ಕ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಈ ಮೂವರು ರೇಣುಕಾಸ್ವಾಮಿಯನ್ನು ನಾವೇ ಕೊಂದೆವು ಎಂದು ಸರೆಂಡರ್ ಆಗಿದ್ದರು. ಈ ಕೊಲೆಯಲಲಿ ಮೂವರ ಪಾತ್ರ ಇಲ್ಲ ಎಂಬುದು ಸಾಬೀತಾಗಿದೆ, ಆದರೆ ಕೊಲೆ ಸಾಕ್ಷ ನಾಶದ ಆರೋಪದ ಹಿನ್ನೆಲೆ ಮೂವರ ಹೆಸರನ್ನು ಪೊಲೀಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ಹೆಚ್ಚಿನ ಪಕ್ಷ ಇಂದೇ ಪೊಲೀಸರು 4000 ಹೆಚ್ಚು ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸುವ ಸಾಧ್ಯತೆಯಿದೆ.