alex Certify BREAKING : ತೈಲ ಬೆಲೆ ಏರಿಕೆ ಖಂಡಿಸಿ ‘ಬಿಜೆಪಿ’ ಪ್ರತಿಭಟನೆ ; ಬಿ.ವೈ ವಿಜಯೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತೈಲ ಬೆಲೆ ಏರಿಕೆ ಖಂಡಿಸಿ ‘ಬಿಜೆಪಿ’ ಪ್ರತಿಭಟನೆ ; ಬಿ.ವೈ ವಿಜಯೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ..!

ಬೆಂಗಳೂರು : ಬೆಂಗಳೂರಿನಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಸೈಕಲ್ ಜಾಥಾ ಹಮ್ಮಿಕೊಂಡಿದ್ದರು. ಈ ವೇಳೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ನಡೆಯುತ್ತಿದ್ದಂತಹ ಸೈಕಲ್ ಜಾಥಾದಲ್ಲಿ ಬಿಜೆಪಿ ನಾಯಕರಾದ ಸಿ.ಟಿ ರವಿ, ಶಾಸಕ ಡಾ ಅಶ್ವಥ್ ನಾರಾಯಣ್ , ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ : ಸಿಎಂ ಸಿದ್ದರಾಮಯ್ಯ

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ಮೋದಿ ಸರ್ಕಾರ ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಅನಿವಾರ್ಯವಾಗಿ ತೆರಿಗೆ ಹೆಚ್ಚಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...