ಕಾಬೂಲ್: ಅಫ್ಘಾನಿಸ್ಥಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣದ ಬಳಿ ಮತ್ತೊಂದು ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಭಾರಿ ಹಾನಿಯಾಗಿರುವ ಸಾಧ್ಯತೆ ಇದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇತ್ತೀಚೆಗಷ್ಟೇ ಅಮೆರಿಕ ಹಾಗೂ ಮಿತ್ರಪಡೆಗಳ ಯೋಧರನ್ನು ಗುರಿಯಾಗಿಸಿಕೊಂಡು ಐಸಿಸ್ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದರು. ಘಟನೆಯಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಭಾರಿ ಸಂಖ್ಯೆಯ ಜನ ಗಾಯಗೊಂಡಿದ್ದರು. ಈಗ ಮತ್ತೊಂದು ಸ್ಪೋಟ ಸಂಭವಿಸಿದೆ.
ಕಾಬೂಲ್ ಏರ್ಪೋರ್ಟ್ ಮೇಲೆ ಮತ್ತೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯಿದೆ 24 ರಿಂದ 34ರ ಗಂಟೆಯೊಳಗೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಜೋಬೈಡೆನ್ ಎಚ್ಚರಿಕೆ ನೀಡಿದ್ದರು.
ಆಫ್ಘಾನಿಸ್ತಾನವನ್ನು ತಾಲಿಬಾನ್ ಭಯೋತ್ಪಾದಕರು ವಶಕ್ಕೆ ಪಡೆದುಕೊಂಡ ನಂತರ ಪರಿಸ್ಥಿತಿ ಹದಗೆಟ್ಟಿದ್ದು ಸಾವಿರಾರು ಜನ ದೇಶ ತೊರೆಯಲು ಸಜ್ಜಾಗಿ ಕಾಬೂಲ್ ವಿಮಾನ ನಿಲ್ದಾಣದ ಬಳಿ ನೆಲೆಸಿದ್ದಾರೆ.