ಬಾಲಿವುಡ್ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜನವರಿ 16 ರಂದು ಚಾಕು ಇರಿತಕ್ಕೊಳಗಾಗಿ ಗಾಯಗೊಂಡಿದ್ದ ನಟ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು.
ಆಪರೇಷನ್ ಮಾಡಿದ ವೈದ್ಯರು ಬೆನ್ನುಹುರಿಯಲ್ಲಿ ಸಿಲುಕಿದ್ದ ಚಾಕುವಿನ ತುಂಡನ್ನು ತೆಗೆದಿದ್ದರು. ನಂತರ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಅವರ ಚೇತರಿಕೆಯ ಪ್ರಗತಿಯನ್ನು ಪರಿಶೀಲಿಸುತ್ತಿದ್ದ ವೈದ್ಯರು ಇಂದು ಸೈಫ್ ಅಲಿ ಖಾನ್ ರನ್ನು ಡಿಸ್ಚಾರ್ಜ್ ಮಾಡಿದ್ದಾರೆ.
ಸೈಫ್ ಮೇಲೆ ಹಲ್ಲೆ ಮಾಡಿದ ದಾಳಿಕೋರ ಬಾಂಗ್ಲಾದೇಶದ ಝಲೋಕಾತಿ ಜಿಲ್ಲೆಯವನಾಗಿದ್ದು, ತನ್ನ ಹೆಸರನ್ನು ವಿಜಯ್ ದಾಸ್ ಎಂದು ಬದಲಾಯಿಸಿಕೊಂಡ ನಂತರ ಅಕ್ರಮವಾಗಿ ಭಾರತದಲ್ಲಿ ವಾಸಿಸುತ್ತಿದ್ದನು.
ಶೆಹಜಾದ್ ಐದು ತಿಂಗಳಿನಿಂದ ಮುಂಬೈನಲ್ಲಿ ವಾಸಿಸುತ್ತಿದ್ದು, ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದನು ಮತ್ತು ಹೌಸ್ ಕೀಪಿಂಗ್ ಏಜೆನ್ಸಿಯೊಂದಿಗೆ ಸಂಬಂಧ ಹೊಂದಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.