ಬೆಂಗಳೂರು : ಬೆಂಗಳೂರಿನ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮುಳಬಾಗಿಲು ಮೂಲದ ಎಸ್. ಭಾಸ್ಕರ್ ಎಂದು ಗುರುತಿಸಲಾಗಿದ್ದು, ಬಂಧನದ ವೇಳೆ ವಿಚಾರಣೆ ನಡೆಸಲಾಗಿದ್ದು, ವಿಚಾರಣೆ ವೇಳೆ ಬಾಂಬ್ ಬೆದರಿಕೆ ಕರೆ ಮಾಡಬೇಕು ಅನಿಸ್ತು ಅದಕ್ಕೆ ಮಾಡಿದ್ದೆ. ಇಂಟರ್ ನೆಟ್ ನಲ್ಲಿ ಎನ್ ಐಎ ನಂಬರ್ ಇತ್ತು. ನಂಬರ್ ಗೆ ಕರೆ ಮಾಡಿ ರಾಜಭವನಕ್ಕೆ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದೇನೆ ಎಂದು ಹೇಳಿದ್ದಾನೆ ಎನ್ನಲಾಗಿದೆ.
ಫೋನ್ ಕರೆ ಮಾಡಿ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ರಾತ್ರಿ 11.30 ರ ಸುಮಾರಿಗೆ ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದ್ದಾನೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ತಿಳಿಸಿದ್ದರು.