ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿಗೆ ಹುಸಿ ಬಾಂಬ್ ಕರೆ ಬಂದಿದೆ.
ಪರಿಣಾಮ ಉದ್ಯೋಗಿಗಳು ಆತಂಕಗೊಂಡಿದ್ದು, ಎಲ್ಲರೂ ಕಂಪನಿಯೊಂದ ಹೊರ ಬಂದಿದ್ದಾರೆ. ಟಿಸಿಎಸ್ ಕಂಪನಿಯ ಬಿ ಬ್ಲ್ಯಾಕ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಾಂಬ್ ನಿಷ್ಕ್ರಿಯ ದಳಕ್ಕೂ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ
ಟಿಸಿಎಸ್ ಕಂಪನಿಯ ಮಾಜಿ ಉದ್ಯೋಗಿ ಈ ಕರೆ ಮಾಡಿದ್ದಾರೆ ಎನ್ನಲಾಗಿದ್ದು, ಕಂಪನಿಯ ಮೇಲಿನ ದ್ವೇಷಕ್ಕೆ ಈ ಹುಸಿ ಕರೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.