ಮುಂಬೈ : ಹೊಸ ವರ್ಷದ ಆಚರಣೆಯ ನಡುವೆ ನಗರದ ಹಲವಾರು ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಅಪರಿಚಿತ ಕರೆ ಬಂದ ನಂತರ ಮುಂಬೈ ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ.
ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಶನಿವಾರ ಸಂಜೆ 6 ಗಂಟೆಗೆ ಕರೆ ಬಂದಿದೆ. ಕರೆ ಮಾಡಿದವನು “ಮುಂಬೈನಲ್ಲಿ ಬಾಂಬ್ ಸ್ಫೋಟ ನಡೆಯಲಿದೆ ಎಂದು ” ಎಂದು ಹೇಳಿಕೊಂಡು ಕರೆ ಸ್ಥಗಿತಗೊಳಿಸಿದ್ದಾನೆ.
ಕರೆ ಬಂದ ನಂತರ ಹಲವಾರು ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಆದರೆ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಕರೆ ಮಾಡಿದವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದರು. ಹೊಸ ವರ್ಷದ ಆಚರಣೆಯನ್ನು ಪರಿಗಣಿಸಿ ಮುಂಬೈ ಪೊಲೀಸರು ನಗರದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.