ಬೆಂಗಳೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಟ್ಟು 22 ಪ್ರಕರಣ ದಾಖಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಟ್ಟು 22 ಪ್ರಕರಣ ದಾಖಲಾಗಿದೆ. ಹೊಸ ಪ್ರಕರಣಕ್ಕೂ ಹಳೆ ಪ್ರಕರಣಕ್ಕೂ ಸಾಮ್ಯತೆ ಇದೆಯಾ ಪರಿಶೀಲನೆ ಮಾಡುತ್ತೇವೆ, ಈ ಬಗ್ಗೆ ಇಂಟರ್ ಪೋಲ್, ಸಿಸಿಬಿಗೆ ಮಾಹಿತಿ ನೀಡುತ್ತೇನೆ . ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ, ಈ ಬಗ್ಗೆ ಸಿಸಿಬಿ ಪೊಲೀಸರಿಂದ ಮಾಹಿತಿ ಪಡೆದು ತನಿಖೆ ನಡೆಸುವುದಾಗಿ ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ 70 ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಈ ಹಿನ್ನೆಲೆ ಪೋಷಕರು, ಮಕ್ಕಳಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಯಾವುದೇ ಶಾಲೆಗಳಲ್ಲಿ ಯಾವುದೇ ಸ್ಪೋಟಕ ವಸ್ತು, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ತನಿಖೆಗೆ ಆದೇಶಿಸಿದ್ದರು. ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಶಾಲೆಗಳಿಗೂ ಸೂಕ್ತ ಭದ್ರತೆ ಒದಗಿಸುವಂತೆ ಸೂಚಿಸಿದ್ದರು.