ಬೆಂಗಳೂರು : ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೋಟೆಲ್ ನ ಇಮೇಲ್ ಐಡಿಗೆ ಕಿಡಿಗೇಡಿಗಳು ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿ ಸಂದೇಶ ಕಳುಹಿಸಿದ್ದಾರೆ.
ರಾಜಕಾರಣಿಗಳು, ಕ್ರಿಕೆಟಿಗರು, ಸಿನಿಮಾ ತಾರೆಯರು ವಾಸ್ತವ್ಯ ಹೂಡುವ ಬೆಂಗಳೂರಿನ ಪ್ರತಿಷ್ಟಿತ ತಾಜ್ ವೆಸ್ಟೆಂಡ್’ ಹೋಟೆಲ್ ಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ನಂತರ ಇದೊಂದು ಹುಸಿ ಸಂದೇಶ ಎಂಬುದು ಸ್ಪಷ್ಟವಾಯಿತು.
ಇ ಮೇಲ್ ನೋಡಿದ ಕೂಡಲೇ ಸಿಬ್ಬಂದಿಗಳು ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ನಂತರ ಇದು ಹುಸಿ ಬಾಂಬ್ ಎಂಬುದು ಖಚಿತವಾಯಿತು. ಘಟನೆ ಸಂಬಂಧ ಪೊಲೀಸರು ಕ್ರಮ ಕೈಗೊಂಡು ತನಿಖೆ ನಡೆಸುತ್ತಿದ್ದಾರೆ.