ಬೆಂಗಳೂರು : ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹನುಮಂತನಗರ ಠಾಣಾ ವ್ಯಾಪ್ತಿಯ ಕೆಲವು ಕಾಲೇಜುಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ. ಘಟನೆ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಬಿಎಂಎಸ್ ಕಾಲೇಜು ಸೇರಿ ಕೆಲವು ಕಾಲೇಜುಗಳಿಗೆ ಬೆದರಿಕೆ ಪತ್ರ ಬಂದಿದೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.