ಬೆಂಗಳೂರು : ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ.
ಬೆಂಗಳೂರಿನ ಪ್ರತಿಷ್ಟಿತ 3 ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಇ ಮೇಲ್ ಬಂದಿದ್ದು, ಹೋಟೆಲ್ ಮಾಲೀಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾತ್ರಿ 12 ಗಂಟೆಗೆ ಬಾಂಬ್ ಹಾಕುತ್ತೇವೆ ಎಂದು ಇ ಮೇಲ್ ಕಳುಹಿಸಲಾಗಿದ್ದು, ಹೋಟೆಲ್ ಸಿಬ್ಬಂದಿ ಬೆಳಗ್ಗೆ ಇ ಮೇಲ್ ಚೆಕ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ.