ಚಾಮರಾಜನಗರ : ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು, ಡಿಸೆಂಬರ್ 31 ಮತ್ತು ಜನವರಿ 1ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಬಂಡೀಪುರ ಅರಣ್ಯ ಇಲಾಖೆ ನಿರ್ಧರಿಸಿದೆ.
ಪರಿಸರ ಸೂಕ್ಷ್ಮ ವಲಯದಲ್ಲಿರುವ ಹೋಂ ಸ್ಟೇ, ರೆಸಾರ್ಟ್ಗಳಲ್ಲಿ ಡಿಜೆ, ಪಟಾಕಿ ಸಿಡಿಸುವುದು, ಲೈಟಿಂಗ್ ಸೇರಿದಂತೆ ಕೆಲ ನಿರ್ಬಂಧ ಹೇರಲಾಗಿದೆ.ಡಿಸೆಂಬರ್ 31 ಮತ್ತು ಜನವರಿ 1ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಬಂಡೀಪುರ ಅರಣ್ಯ ಇಲಾಖೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಡಿ.31ರಂದು ಹಾಗೂ ಜನವರಿ 1ರಂದು ಎಂದಿನಂತೆ ಸಫಾರಿ ನಡೆಯಲಿದೆ. ಆದ್ರೇ ರಾತ್ರಿ ಬಂಡೀಪುರದಲ್ಲಿನ ವಸತಿಗೃಹ, ಕಾಟೇಜ್ ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಅವಕಾಶವಿಲ್ಲ ಎಂದು ಬಂಡೀಪುರ ವಲಯ ಅರಣ್ಯಾಧಿಕಾರಿ ರಮೇಶ್ ಕುಮಾರ್ ಹೇಳಿದ್ದಾರೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಖಾಸಗಿ ರೆಸಾರ್ಟ್ ಗಳಲ್ಲಿಯೂ ಮೋಜು, ಮಸ್ತಿಗೆ ಬ್ರೇಕ್ ಹಾಕಲಾಗಿದೆ. ಖಾಸಗಿ ರೆಸಾರ್ಟ್ ಗಳಲ್ಲಿ ಮೋಜು ಮಸ್ತಿ ಮಾಡುವಂತಿಲ್ಲ. ಕಲರ್ ಲೈಟಿಂಗ್ ಅಳವಡಿಸದಂತೆ ನಿರ್ಬಂಧ ವಿಧಿಸಲಾಗಿದೆ.