
ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದ್ದು, ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದರೂ ತಾಲೂಕಿನ ಸಿಎ ಕೆರೆ ಹೋಬಳಿಯ ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಮೂವರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದು, ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊರೆಬೊಮ್ಮನಹಳ್ಳಿ ಗ್ರಾಮದ ಅಪ್ರಾಪ್ತಿ ಬಾಲಕಿಯನ್ನು ಪುನೀತ್ ಎಂಬಾತ ಕಾಮುಕ ಪುಸಲಾಯಿಸಿ ಬಸ್ ನಲ್ಲಿ ಕರೆದುಕೊಂಡು ಶಿವಪುರದಲ್ಲಿರುವ ಲಾಡ್ಜ್ ವೊಂದರಲ್ಲಿ ಏಕಾಏಕಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ.ಅಷ್ಟೇ ಅಲ್ಲದೇ ಆತನ ಸ್ನೇಹಿತ ಮಂಜುನಾಥ್, ಸಿದ್ದಾರ್ಥ್ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಬಾಲಕಿಯ ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆ ಸಂಬಂಧ ಅಪ್ರಾಪ್ತೆ ಬಾಲಕಿಯ ಪೋಷಕರು ಮದ್ದೂರು ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ಪೋಷಕರ ದೂರಿನ ಅನ್ವಯ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.