alex Certify BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಬ್ರೇಕ್ : ‘ಸುಗ್ರೀವಾಜ್ಞೆ’ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಬ್ರೇಕ್ : ‘ಸುಗ್ರೀವಾಜ್ಞೆ’ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ.!

ಬೆಂಗಳೂರು : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇಂದೇ ರಾಜ್ಯಪಾಲರ ಅಂಕಿತ ಪಡೆಯಲು ನಿರ್ಧರಿಸಲಾಗಿದೆ.

ಇದಕ್ಕೆ ಇನ್ನೊಂದಷ್ಟು ಅಂಶಗಳನ್ನು ಸೇರಿಸಲು ನಿರ್ಧರಿಸಲಾಗಿದ್ದು, ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿದ್ದು, ಈ ಮೂಲಕ ಕಿರುಕುಳ ನೀಡುವ ಫೈನಾನ್ಸ್ ಕಂಪನಿಗಳಿಗೆ ಸರ್ಕಾರ ಬಿಸಿ ಮುಟ್ಟಿಸಲಿದೆ.

ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಹಾವಳಿಗೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ.
ಮೀಟರ್ ಬಡ್ಡಿ ದಂಧೆಕೋರರ ಮೇಲೆ ಹದ್ದಿನ ಕಣ್ಣಿಡಲು ಸೂಚಿಸಲಾಗಿದೆ. ಫೈನಾನ್ಸ್ ನವರಿಂದ ಯಾವುದೇ ತೊಂದರೆಯಾದಲ್ಲಿ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಹೇಳಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...