ತಿಹಾರ್ ಜೈಲಿನಲ್ಲಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮಂಗಳವಾರ ಸಂಜೆ ದೆಹಲಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲಿದ್ದಾರೆ.ಕವಿತಾ ಅವರನ್ನು ಈ ವರ್ಷದ ಮಾರ್ಚ್ 15 ರಂದು ಬಂಧಿಸಲಾಯಿತು. ಆರು ದಿನಗಳ ನಂತರ, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತು. ಈ ತಿಂಗಳ ಆರಂಭದಲ್ಲಿ, ಕೆ.ಕವಿತಾ ಅವರು ಈಗ ರದ್ದುಪಡಿಸಲಾದ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ “ಡೀಫಾಲ್ಟ್” ಜಾಮೀನು ಕೋರಿ ದೆಹಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದರು.ಕವಿತಾ ಅವರನ್ನು ಮೊದಲು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಮುಂದಿನ ತಿಂಗಳು ಸಿಬಿಐ ಆಕೆಯನ್ನು ಬಂಧಿಸಿತ್ತು.
ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಈ ಎರಡೂ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.