ಬೀದರ್ : ಕಲ್ಲಿನಿಂದ ಜಜ್ಜಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಬಳಿ ನಡೆದಿದೆ.
ಯುವಕ ಅಮಿತ್ ಮಾನಜಿ (35) ಎಂಬಾತನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ತಮ್ಮ ಜಮೀನನಲ್ಲಿ ಕೆಲಸ ಮುಗಿಸಿ ರಾತ್ರಿ 9:30 ರ ಸುಮಾರಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ಅಮಿತ್ ಬೈಕ್ ಅಡ್ಡಗಟ್ಟಿದ ಕಲ್ಲಿನಿಂದ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಹಳೇ ದ್ವೇಷಕ್ಕೆ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.