ಬೆಂಗಳೂರು : ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಇಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಹೌದು. ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ-ಜೆಡಿಎಸ್ ಜಂಟಿ ಸಮರ ಆರಂಭವಾಗಿದೆ.
ನಗಾರಿ ಬಾರಿಸುವ ಮೂಲಕ ಬಿ.ಎಸ್ ಯಡಿಯೂರಪ್ಪ , ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ಅಧಿಕೃತವಾಗಿ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಪಾದಯಾತ್ರೆ ನಡೆಯಲಿದೆ. ಇಂದು ಬಿಜೆಪಿ-ಜೆಡಿಎಸ್ ನಾಯಕರು 16 ಕಿ.ಮೀ ಪಾದಯಾತ್ರೆ ನಡೆಸಲಿದ್ದು, ನಾಳೆ 22 ಕಿಮೀ ಪಾದಯಾತ್ರೆ ನಡೆಸಲಿದ್ದಾರೆ.
ಸಭಾಮಂಟಪ ಹಾಗೂ ವೇದಿಕೆಯಲ್ಲಿ ಪಾದಯಾತ್ರೆಗೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ. ಇಂದಿನಿಂದ ಆಗಸ್ಟ್ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದ್ದು, ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.