ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಐವರು ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದು ಮೃತಪಟ್ಟ ಎಲ್ಲ ಕಾರ್ಮಿಕರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಲಾಗಿದೆ (ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂ. ಹಾಗೂ ಬಿಬಿಎಂಪಿಯಿಂದ 3ಲಕ್ಷ ರೂ.) ಘಟನಾ ಸ್ಥಳಕ್ಕೆ ನಿನ್ನೆ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಟ್ಟಡ ಮಾಲೀಕರ ತಪ್ಪಿರುವುದು ಮೇಲ್ನೋಟದಲ್ಲೇ ಗೊತ್ತಾಗಿದೆ. ಈ ಘಟನೆ ನಮಗೊಂದು ಪಾಠವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ರೀತಿ ಅನುಮತಿ ಇಲ್ಲದೆ ಅಕ್ರಮವಾಗಿ ನಿರ್ಮಾಣವಾಗುವ ಕಟ್ಟಡಗಳ ಮೇಲೆ ಕಟ್ಟುನಿಟ್ಟಾಗಿ ನಿಗಾವಹಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.